ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು, ಮೇ 7:  ಎಸ್ ಎಸ್ ಎಲ್‌ಸಿ  ಫಲಿತಾಂಶ ನಾಳೆ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ಮಂಡಳಿ ತಿಳಿಸಿದೆ.

ಎಸ್ ಎಸ್ ಎಲ್ ಸಿ  ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ನಾಳೆ (ಮೇ8) ಮುಂಜಾನೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ಅಧೀಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ಪರಿಶೀಲಿಸಲು ಮಂಡಳಿಯ ಅಧಿಕೃತ ಲಿಂಕ್ ಬಳಸಬಹುದು.

 

Leave a Reply

Your email address will not be published. Required fields are marked *