ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಯುವಜನತೆ ಶ್ರಮಿಸಬೇಕು -ಪ್ರಾಂಶುಪಾಲ ಡಾ. ಗವಿಸಿದ್ದಪ್ಪ ಮುತ್ತಾಳ್ 

ಅಳವಂಡಿ, ಜೂ.26: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಯುವಜನತೆ ಶ್ರಮಿಸಬೇಕು ಎಂದು ಪ್ರಾಂಶುಪಾಲರಾದ ಡಾ. ಗವಿಸಿದ್ದಪ್ಪ ಮುತ್ತಾಳ್  ತಿಳಿಸಿದರು.                                                      ಇಲ್ಲಿನ  ಶ್ರೀ ಶಿವಮೂರ್ತಿ ಸ್ವಾಮಿ ಇನಾಮದಾರ್  ಕಟ್ಟಿಮನಿ ಹಿರೇಮಠ ಸರಕಾರಿ ಪ್ರಥಮ ದರ್ಜೆ  ಕಾಲೇಜು ಹಾಗೂ ಅಳವಂಡಿ ಪೊಲೀಸ್ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ  ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಸೇರಿದಂತೆ ವಿವಿಧ ದುಶ್ಚಟಗಳಿಗೆ ದಾಸರಾಗಿ ಅದನ್ನು ಹಾಳು ಮಾಡಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.
ಮಾದಕ ವಸ್ತುಗಳ ಸೇವನೆಯೂ ಅನೇಕ ಅಪರಾಧ ಕೃತ್ಯಕ್ಕೆ ದಾರಿ ಮಾಡಿಕೊಡುತ್ತದೆ. ಮಾದಕ ವ್ಯಸನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ಅದನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.
ಅಳವಂಡಿ ಪೋಲಿಸ್ ಠಾಣೆಯ ಪಿ.ಎಸ್.ಐ ನಾಗರಾಜ್ ಹೆಚ್ ಮಾತನಾಡಿ, ಮಾದಕವಸ್ತುಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಹಾಗಾಗಿ ವಿದ್ಯಾರ್ಥಿಗಳು ಇದರಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಎ.ಎಸ್.ಐ ಶಶಿಕಾಂತ್,   ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಇಮಾಮ್ ಸಾಬ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಜಗದೀಶ್,  ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗೇಂದ್ರಪ್ಪ, ಉಪನ್ಯಾಸಕರಾದ ವಿಜಯ್ ಕುಮಾರ್ ಕುಲಕರ್ಣಿ,ಸಿದ್ದಪ್ಪ, ಪ್ರದೀಪ್ ಪಲ್ಲೇದ್ , ವೆಂಕಟೇಶ್ ,  ಅನಿಲ್,  ವಿನಾಯಕ್ ನಾಯ್ಕ್, ವೀರಯ್ಯ ಮಠದ್, ರಹಿಮಾನ್ ಸಾಬ್ , ರಾಘವೇಂದ್ರ , ಹನುಮೇಶ್ ,  ಕೃಷ್ಣ, ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
——

Leave a Reply

Your email address will not be published. Required fields are marked *