ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಕೆಯುಡಬ್ಲೂಜೆ ಕ್ಯಾಲೆಂಡರ್ ಬಿಡುಗಡೆ ಮತ್ತು ಅಭಿನಂದನಾ ಕಾರ್ಯಕ್ರಮವನ್ನು 2026 ಜನವರಿ 2 ರಂದು ಶುಕ್ರವಾರ ಬೆಳಿಗ್ಗೆ 11ಕ್ಕೆ ಕೆಯುಡಬ್ಲೂೃಜೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭಾಗವಹಿಸಲಿದ್ದು, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಿದ್ದರಾಜು, ಬಿ.ಎಂ.ಹನಿಫ್ ಕೆ.ಸುಬ್ರಹ್ಮಣ್ಯ, ಅಂಶಿ ಪ್ರಸನ್ನಕುಮಾರ್, ಪೋಟೋ ಜರ್ನಲಿಸ್ಟ್ ಶಾಂತರಾಜು ಅವರನ್ನು ಕೆಯುಡಬ್ಲೂಜೆ ವತಿಯಿಂದ ಅಭಿನಂದಿಸಲಾಗುವುದು.
ಇದೇ ಸಂದರ್ಭದಲ್ಲಿ ಮಾಹಿತಿ ಹಕ್ಕು ಆಯೋಗದ ಆಯುಕ್ತರುಗಳಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತರುಗಳಾದ ವೆಂಕಟಸಿಂಗ್, ಮಹೇಶ್ ವಾಳ್ವೇಕರ್ ಅವರನ್ನು ಅಭಿನಂದಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ತಿಳಿಸಿದ್ದಾರೆ.
