
ಬಳ್ಳಾರಿ, ಜ.6: ಗುರುವಾರ(ಜ.1) ನಗರದಲ್ಲಿ ಸಂಭವಿಸಿದ ಗಲಭೆಯಲ್ಲಿ ಸಾವನ್ನಪ್ಪಿದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವ ಕುಮಾರ್ ಅವರು ಕುಟುಂಬದವರಿಗೆ ಸಾಂತ್ವನ ನೀಡಿದರು.
ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಅಗಲಿಕೆ ನನಗೆ ತೀವ್ರ ನೋವು ತಂದಿದೆ. ನಮ್ಮ ಪಕ್ಷ ರಾಜಶೇಖರ್ ಅವರ ಕುಟುಂಬದೊಂದಿಗೆ ಇದೆ ಎಂದರು.
ರಾಜಶೇಖರ ರೆಡ್ಡಿ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯನ್ನು ಕೇಳುತ್ತಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಇರುವ ಅವಕಾಶಗಳನ್ನು ನೋಡಿಕೊಂಡು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಸಂಸದರಾದ ತುಕಾರಾಂ, ಡಾ. ಸಯ್ಯದ್ ನಾಸೀರ್ ಹುಸೇನ್, ಮಾಜಿ ಸಚಿವ, ಶಾಸಕ ಬಿ. ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮತ್ತಿತರರು ಇದ್ದರು.
