ಭಟ್ಕಳ: ಸಿರಿಗೇರಿ ಈಶ್ವರ್ ಗೆ ಕರ್ನಾಟಕ ಮಾಧ್ಯಮ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿ ಪ್ರದಾನ

ಭಟ್ಕಳ,  ಜ.28: ಬೆಂಗಳೂರು ವಿವಿಯ ಸಂವಹನ ವಿಭಾಗದ ಸಂಶೋಧನಾರ್ಥಿ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಗ್ರಾಮದ ಈಶ್ವರ್ ಅವರಿಗೆ  ಕರ್ನಾಟಕ ಮಾಧ್ಯಮ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಭಟ್ಕಳ ತಾಲೂಕು ಘಟಕದಿಂದ ಆಯೋಜಿಸಿದ್ದ ಒಂದು ದಿನದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ  ಶ್ರೀ ವಿಶ್ವ ವೀರಾಂಜನೇಯ ಮಹಾಸಂಸ್ಥಾನಂ, ಹೇಮಪುರ ಮಹಾಪೀಠಮ್, ಶ್ರೀಕ್ಷೇತ್ರ ಬಂಗಾರಮಕ್ಕಿ, ಹೊನ್ನಾವರದ  ಶ್ರೀ ಮಾರುತಿ ಗುರೂಜಿ, ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ, ಕಾ.ನಿ.ಪ.ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ, ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕರು, ಭಟ್ಕಳ ತಾಲೂಕು ಘಟಕ ಅಧ್ಯಕ್ಷ ಶಂಕರ ನಾಯ್ಕ, ಜನಪ್ರತಿನಿಧಿಗಳು, ಹಿರಿಯ ಪತ್ರಕರ್ತರಾದ ಜಗಳೂರು ಲಕ್ಷ್ಮಣರಾವ್, ಗಂಗಾಧರ್ ಮೊದಲಿಯಾರ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.