
ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಯಶಸ್ವಿಯಾಗಿ ಮೂರು ವರ್ಷ ಪೂರೈಸುತ್ತಿರುವ ಕೆ.ವಿ.ಪ್ರಭಾಕರ್ ಅವರೊಂದಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ಮಾಧ್ಯಮ-ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಮೇ 22, 2026ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕೆಜಿ ರಸ್ತೆಯ ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಲಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಖಾನಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾರ್ಯಚಟುವಟಿಕೆಗಳು, ಮಾಧ್ಯಮ ಕ್ಷೇತ್ರದ ಬೆಳವಣಿಗೆಗಳು ಹಾಗೂ ಸಮಕಾಲೀನ ವಿಚಾರಗಳ ಕುರಿತು ಈ ಸಂವಾದದಲ್ಲಿ ಚರ್ಚೆ ನಡೆಯಲಿದೆ.
ರಾಜ್ಯದ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
