ಹರಿಹರ: ನಮ್ಮ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ರಮೇಶ್ ಎಂ ಎನ್ ಅವರು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ, ಬಿಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಭಾಂಗಣದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪದವಿ ಮುಗಿದ ಬಳಿಕ ಉತ್ತಮ ಅವಕಾಶಗಳಿವೆ. ಉನ್ನತ ಶಿಕ್ಷಣ ಪಡೆಯುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ನಮ್ಮ ಕಾಲೇಜಿನಲ್ಲಿ ಉತ್ತಮ ಅಧ್ಯಾಪಕ ವರ್ಗವಿದೆ. ಇಲ್ಲಿ ವಿದ್ಯಾಭ್ಯಾಸ ಮಾಡಿದ ಬಹಳಷ್ಟು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆದು ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಉದ್ಯೋಗ ವಿದ್ದರೆ ಸಮಾಜದಲ್ಲಿ ಗೌರವಿರುತ್ತದೆ ಎಂದು ಕಿವಿಮಾತು ಹೇಳಿದರು.
ಪ್ರಸ್ತುತ ಕಾಲೇಜಿನಲ್ಲಿ ನಡೆಯುತ್ತಿರುವ ಪ್ರವೇಶಾತಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಾವು
ಕಿರಿಯರಿಗೆ ಮಾರ್ಗದರ್ಶನ ನೀಡಿ ಪ್ರವೇಶಾತಿ ಪಡೆಯಲು ಸಹಕರಿಸಬೇಕು ಎಂದು ಡಾ. ರಮೇಶ್ ಅವರು ಕೋರಿದರು.
ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಾಬು ಕೆ.ಎ,
ಡಾ. ಅನಂನಾಗ್ ಹೆಚ್. .ಪಿ, ಮತ್ತಿತರರು ಮಾತನಾಡಿ ಶುಭ ಕೋರಿದರು.
ಡಾ. ದ್ರಾಕ್ಷಾಯಣಿ ಜಿ.ಎನ್, . ಪ್ರೊ. ಯೋಗೀಶ್ ಕೆ.ಜೆ, ಅರ್ಚನಾ ಎ, ನಾಗವೇಣಿ ಆರ್ ಎಸ್, ಐಶ್ವರ್ಯ ಶೆಟ್ಟರ್, ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಲಕ್ಷ್ಮಣ ನಾಯ್ಕ ಆರ್, ಉಪನ್ಯಾಸಕರಾದ ವೀರೇಶ್ ಅರಲೂರು, ಸುಬ್ರಹ್ಮಣ್ಯ ಟಿ ಆರ್, ಶಿಲ್ಪ ಬಿ ಎನ್, ಪತ್ರಿಕೋದ್ಯಮ ವಿಭಾಗದ ಸಿ. ಮಂಜುನಾಥ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಮಂಜುಳಾ ಸ್ವಾಗತಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
—–
