ಚಾಮರಾಜನಗರದಲ್ಲಿ ಬಿ.ರಾಚಯ್ಯ ದತ್ತಿನಿಧಿಗೆ 1.10ಲಕ್ಷ ನೀಡಿದ ಶಾಸಕ ಕೃಷ್ಣಮೂರ್ತಿ:ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು: ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸಿದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದಿಸಿದೆ.

ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು, ಸಂಘವು ಸ್ಥಾಪಿಸಿರುವ ಬಿ.ರಾಚಯ್ಯ ಹೆಸರಿನ ದತ್ತಿ ಪ್ರಶಸ್ತಿಗೆ ಒಂದು ಲಕ್ಷ ಹತ್ತು ಸಾವಿರ ರೂ (1,10,000) ಚೆಕ್ ನೀಡಿದ್ದಾರೆ.
ಸಂಘದಲ್ಲಿ ಬಿ.ರಾಚಯ್ಯ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸಿದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದಿಸಿ, ಧನ್ಯವಾದಗಳನ್ನು ತಿಳಿಸಿದ್ದಾರೆ

Leave a Reply

Your email address will not be published. Required fields are marked *