
ಬಳ್ಳಾರಿ, ಮೇ 29: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ರಾಜ್ಯ ಸಿಎಂಎಸ್ ಉಪಾಧ್ಯಕ್ಷ ಸಿ.ನರಸಪ್ಪ ಅವರು ಒತ್ತಾಯಿಸಿದ್ದಾರೆ.
ನಗರದ ಪತ್ರಿಕಾ ಭವನದ ಆವರಣದಲ್ಲಿ ಮಾದ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇವರ ಮತ್ತು ಕುಟುಂಬದ ನಿಷ್ಠೆ ಅನನ್ಯ. ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ, ಶಾಸಕರಾಗಿ, ರಾಜ್ಯ, ಕೇಂದ್ರ ಸಚಿವರಾಗಿ ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿ ಶ್ರಮಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯದಕ್ಷತೆ ಮತ್ತು ಸೈದ್ಧಾಂತಿಕ ಸ್ಪಷ್ಟತೆ, ಸಮರ್ಥ ಆಡಳಿತ, ದೂರದೃಷ್ಟಿ ನಾಯಕತ್ವ ನೋಡಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಿಎಂಎಸ್ ಜಿಲ್ಲಾಧ್ಯಕ್ಷರಾದ ಸಿ. ಶಿವಕುಮಾರ್, ಜೆ ಎಸ್ ಶ್ರೀನಿವಾಸುಲು, ಮುಖಂಡರಾದ ಶಂಕರ ನಂದಿಹಾಳ್, ಹನುಮೇಶ್ ಕಟ್ಟೀಮನಿ, ಗಾದಿಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
—–
