ಡಾ. ಅಮ್ಮಸಂದ್ರ ಸುರೇಶ್ ಅವರಿಗೆ ಕರ್ನಾಟಕ ರಾಜ್ಯ ಮಟ್ಟದ ಅತ್ಯುತ್ತಮ ಮಾರುಕಟ್ಟೆ ಅಧಿಕಾರಿ ಪ್ರಶಸ್ತಿ

ಮೈಸೂರು, ಜೂ.26:  ಮೈಸೂರು ಅಂಚೆ ವಿಭಾಗದ ಮಾರುಕಟ್ಟೆ ಅಧಿಕಾರಿ ಡಾ. ಅಮ್ಮಸಂದ್ರ ಸುರೇಶ್ ಅವರಿಗೆ ಕರ್ನಾಟಕ ಅಂಚೆ ವೃತ್ತದಿಂದ ರಾಜ್ಯ ಮಟ್ಟದ ಅತ್ಯುತ್ತಮ ಮಾರುಕಟ್ಟೆ ಅಧಿಕಾರಿ ಪ್ರಶಸ್ತಿ ಲಭಿಸಿದೆ.

2025-26ನೇ ಸಾಲಿನಲ್ಲಿ ಅತಿ ಹೆಚ್ಚು ಗ್ರಾಹಕರನ್ನು ನೋಂದಾಯಿಸಿದ ಸಾಧನೆ ಹಾಗೂ ಫಿಲಾಟೆಲಿ ವಿಭಾಗದಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ಅವರು ಎರಡು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಬಸವ ಭವನದಲ್ಲಿ ನಡೆದ “ಉನ್ನತಿ” ಅಂಚೆ ವೃತ್ತ ಶ್ರೇಷ್ಠತಾ ಪುರಸ್ಕಾರ-2025-26 ಸಮಾರಂಭದಲ್ಲಿ ಕರ್ನಾಟಕ ಅಂಚೆ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಕೆ. ಪ್ರಕಾಶ್ ಪ್ರಶಸ್ತಿ ಪ್ರದಾನ ಮಾಡಿದರು.

ಡಾ. ಅಮ್ಮಸಂದ್ರ ಸುರೇಶ್ ಅವರು ಸತತ ಮೂರನೇ ವರ್ಷ ಈ ಗೌರವಕ್ಕೆ ಪಾತ್ರರಾಗಿದ್ದು, ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ. ಹರೀಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

 

Leave a Reply

Your email address will not be published. Required fields are marked *