
ಬೆಂಗಳೂರು, ಜೂ28: ಪ್ರಜಾವಾಣಿ, ಮುಂಗಾರು, ಲಂಕೇಶ್ ಪತ್ರಿಕೆ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕ್ರೀಯಾಶೀಲ ಪತ್ರಕರ್ತ ಮತ್ತು ಉಲ್ಟಾ ಪಲ್ಟಾ ಚಿತ್ರ ನಿರ್ದೇಶನ ಖ್ಯಾತಿಯ ಎನ್.ಎಸ್.ಶಂಕರ್ ಬೆಂಗಳೂರಿನಲ್ಲಿ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಶಂಕರ್ ಅವರ ಹಿರಿತನದ ವೃತ್ತಿ ಸೇವೆ ಸ್ಮರಿಸಿ ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಕಾರ್ಯಕ್ರಮದಲ್ಲಿ ಗೌರವಿಸಿದ್ದು ಮರೆಯಲಾಗದ ಸಂಗತಿ ಎಂದು ನೆನಪಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ನೆನಪಿಸಿಕೊಂಡಿದ್ದಾರೆ.
ಎನ್.ಎಸ್.ಶಂಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ತಗಡೂರು ಪ್ರಾರ್ಥಿಸಿದ್ದಾರೆ.
—-
