ಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ

ಟಿ. ರಘುಮೂರ್ತಿ

ಬಳ್ಳಾರಿ,ಸೆ.15: ಸೆ. 17ರಂದು ನಡೆಯಲಿರುವ ಐತಿಹಾಸಿಕ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಟಿ. ರಘುಮೂರ್ತಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಅಧಿಕೃತ ಆದೇಶ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ ಒಟ್ಟು 7 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನಿಯೋಜಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
——-

Leave a Reply

Your email address will not be published. Required fields are marked *