ಶ್ರೀ ಮಹರ್ಷಿ ವಾಲ್ಮೀಕಿ ಅವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಎ.ರಮೇಶ್

ಬಳ್ಳಾರಿ, ಅ.26:ಶ್ರೀ ಮಹರ್ಷಿ ವಾಲ್ಮೀಕಿ ಅವರ  ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ಎ. ರಮೇಶ್ ತಿಳಿಸಿದರು.

ನಗರದ ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.                                   ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಹಾಗೂ ಮಾನವೀಯ ಮೌಲ್ಯಗಳು ಸಮಾಜಕ್ಕೆ ಸದಾ ಮಾರ್ಗದರ್ಶನ ನೀಡುತ್ತವೆ. ಅವರ ಜೀವನದ ಸಂದೇಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಚಂದ್ರಿಕಾ, ಪದ್ಮಾವತಿ, ಗ್ರಂಥಪಾಲಕ ಚಂದ್ರಶೇಖರ, ಎಫ್‌ಡಿಎ ಹೊನ್ಮಾಳಿ ರಾಜಶೇಖರ ಗೌಡ, ಅಕೌಂಟೆಂಟ್ ರೂಪ, ಸಿಸಿಟಿ ಗಿರಿರಾಜ್ ಹಾಗೂ ಜವಾನರಾದ ಕೊಟ್ರೇಶ್, ಸೋಮಶೇಖರ್ ಮತ್ತು ಸುಗೂರಯ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *