ಬಳ್ಳಾರಿ, ನ.12: ರಾಜ್ಯ ಆದಿ ಜಾಂಬವ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ನಗರದ ಹೆಚ್. ಸಿದ್ದೇಶ್ ಉಬ್ಬಳಗಂಡಿ ಹಾಗೂ ಕರ್ನಾಟಕ ನಗರ ಮೂಲ ಸೌಕರ್ಯ ಹಾಗೂ ಹಣಕಾಸು ನಿಗಮದ ನಿರ್ದೇಶಕರಾಗಿ ಹುಸೇನಪ್ಪ ಅವರು ನೇಮಕವಾಗಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ಸೇವೆ ಸಲ್ಲಿಸಿರುವ ಹಿರಿಯರನ್ನ ಗುರುತಿಸಿ ಅವರನ್ನು ವಿವಿಧ ನಿಗಮ ಮಂಡಳಿಗಳಿಗೆ ಪದಾಧಿಕಾರಿಗಳಾಗಿ ನೇಮಿಸಿರುವ ಪಕ್ಷದ ವರಿಷ್ಠರಿಗೆ ಬಳ್ಳಾರಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ ಎಸ್. ಮಲಿಯಪ್ಪ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
