ಬಳ್ಳಾರಿ, ನ.17: ಹೊಸಪೇಟೆ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೊ. ವೀರಭದ್ರಪ್ಪ ತಂಬ್ರಳ್ಳಿ ಅವರಿಗೆ ಗ್ರೇಡ್-1 ಪ್ರಾಂಶುಪಾಲರಾಗಿ ಪದೋನ್ನತಿ ನೀಡಿ ನಗರದ ಶ್ರೀ ಗಾಲಿ ರುಕ್ಮಿಣಮ್ಮ ಚೆನ್ನಾರೆಡ್ಡಿ ಮೆಮೋರಿಯಲ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್(ಸಿಟಿ) ಕಾಲೇಜಿಗೆ ಸ್ಥಳ ನಿಯುಕ್ತಿ ಮಾಡಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ಮಾನ್ಯ ಆಯುಕ್ತರು 222 ಅಭ್ಯರ್ಥಿಗಳಿಗೆ ಗ್ರೇಡ್-1 ಪ್ರಾಂಶುಪಾಲರ ನೇಮಕಾತಿ ಆದೇಶ ಹಾಗೂ ಸ್ಥಳ ನಿಯುಕ್ತಿಯನ್ನು ಕೌನ್ಸೆಲಿಂಗ್ ಮೂಲಕ ಹೊರಡಿಸಿದ್ದು, ಪ್ರೊ. ವೀರಭದ್ರಪ್ಪ ತಂಬ್ರಳ್ಳಿ ಅವರಿಗೆ ಬಳ್ಳಾರಿ (ಸಿಟಿ) ಕಾಲೇಜಿಗೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ.
ಇವರು ಮೇ 2022ರಿಂದ ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು . ಅಲ್ಲದೆ, ಕನ್ನಡ ವಿಶ್ವವಿದ್ಯಾಲಯ, ಹಂಪಿಯ ಅಭಿವೃದ್ಧಿ ಅಧ್ಯಯನ ವಿಭಾಗದ ಮೂಲಕ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪಿಎಚ್.ಡಿ. ಪದವಿ ಪಡೆಯಲು ನೆರವಾಗಿರುವುದು ಶ್ಲಾಘನೀಯ ಸಂಗತಿಯಾಗಿದೆ.
23 ಮಾರ್ಚ್ 2026ರಿಂದ ಹೊಸಪೇಟೆ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾಗಿ ಜವಾಬ್ದಾರಿ ವಹಿಸಿಕೊಂಡ ಇವರು, ಅಲ್ಪಾವಧಿಯಲ್ಲಿಯೇ ಕಾಲೇಜಿನ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ್ದಾರೆ. ಕಾಲೇಜಿನ ವಿವಿಧ ವಿಭಾಗಗಳು ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC) ಸಹಯೋಗದೊಂದಿಗೆ ಸಾಂಸ್ಕೃತಿಕ ಹಬ್ಬ, ಕ್ರೀಡಾಕೂಟ, ವಿವಿಧ ಸ್ಪರ್ಧೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ, ಸ್ಪರ್ಧಾತ್ಮಕ ಮನೋಭಾವ ಹಾಗೂ ಸೃಜನಶೀಲತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರು. ಇವರ ಪದೋನ್ನತಿಗೆ ವೀರಭದ್ರಪ್ಪ ಅವರ ಸಹಪಾಠಿಗಳು ಸ್ನೇಹಿತರು ಮತ್ತು ಅವರ ಶ್ರೇಯೋಭಿಲಾಷಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
