ಬಳ್ಳಾರಿ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಡಿಸಿಆರ್ ಇ) ಬಳ್ಳಾರಿ ವಿಭಾಗದ ಡಿವೈಎಸ್.ಪಿ ದತ್ತಾತ್ರೇಯ ಕಾರ್ನಾಡ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ದತ್ತಾತ್ರೇಯ ಕಾರ್ನಾಡ್ ಅವರು, ಶೀಘ್ರದಲ್ಲೇ ನಗರದ ಡಿಸಿಆರ್ ಇ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ನಾಗರಿಕ ಹಕ್ಕುಗಳ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅವರ ಅನುಭವ ತಮಗೆ ಹೆಚ್ಚಿನ ಬಲ ತುಂಬಲಿದೆ ಎಂದು ನೊಂದ, ತಳ ಶೋಷಿತ ಸಮುದಾಯ ಸಂತಸ ವ್ಯಕ್ತಪಡಿಸಿದೆ.
