ನವಲಿ ಬಳಿ ಸಮತೋಲನ ಸಂಗ್ರಹಣಾ ಜಲಾಶಯ: ಜನಪ್ರತಿ‌ನಿಧಿಗಳ ಜತೆ ಮುಖ್ಯಮಂತ್ರಿ ಬಿ.ಎಸ್.ವೈ ಚರ್ಚೆ

ಬೆಂಗಳೂರು, ಮಾರ್ಚ್ 02: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತುಂಗಭದ್ರ ಜಲಾಶಯದ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸುವ ಪರ್ಯಾಯ ಮಾರ್ಗೋಪಾಯವಾಗಿ ಪ್ರವಾಹ ಹರಿಯುವ ನಾಲೆ ಮೂಲಕ ನವಲಿ ಹತ್ತಿರ ಸಮತೋಲನ ಸಂಗ್ರಹಣಾ ಜಲಾಶಯ ನಿರ್ಮಿಸುವ ಕುರಿತಂತೆ ಕೊಪ್ಪಳ ಬಳ್ಳಾರಿ ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳ ಜನ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಂಸದ ದೇವೇಂದ್ರಪ್ಪ, ಶಾಸಕರಾದ ಎಂ ಎಸ್ ಸೋಮಲಿಂಗಪ್ಪ, ಜಿ.ಸೋಮಶೇಖರ ರೆಡ್ಡಿ, ಕೆ ಸಿ‌ ಕೊಂಡಯ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *