ಮೇ 10ರಿಂದ 24ರವರೆಗೆ ಸಾರ್ವಜನಿಕರ ಅನವಶ್ಯಕ ಓಡಾಟ ಸಂಪೂರ್ಣ ನಿಷೇಧ: ಬಳ್ಳಾರಿ ಜಿಲ್ಲಾಧಿಕಾರಿ ಮಾಲಪಾಟಿ

ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮೇ 10ರ ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6ರವರೆಗೆ ಸಾರ್ವಜನಿಕರು ಅನವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ
ನಿಗದಿತ ಸಮಯದಲ್ಲಿ ಅನುಮತಿಸಲಾದ ಚಟುವಟಿಕೆಗಳನ್ನು ಹೊರತುಪಡಿಸಿ ಅನವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಆದೇಶವು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಈ ಕಾರ್ಯಾಲಯದಿಂದ ಹಿಂದೆ ಹೊರಡಿಸಲಾದ ಎಲ್ಲ ಆದೇಶಗಳನ್ನು ರದ್ದುಗೊಳಿಸುತ್ತದೆ ಎಂದಿರುವ ಅವರು  ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51ರಿಂದ 60 ಹಾಗೂ ಐಪಿಸಿ ಸೆಕ್ಷನ್ 188ರಂತೆ ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *