ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ‌ಮಾಡಿದ ಶಾಸಕ ಬಿ.ನಾಗೇಂದ್ರ

ಬೆಂಗಳೂರು: ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚಿಸಿದರು.
ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಕೋವಿಡ್ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ನಾಡಿನ ಜನತೆಗೆ ಸ್ಪಂದನೆ, ಪರಿಹಾರ ಹಾಗೂ ತಮ್ಮ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ ಹಾಗೂ ತಮ್ಮ‌ಫೇಸ್ ಬುಕ್ ಪೇಜ್ ನಲ್ಲಿ ಶಾಸಕ ನಾಗೇಂದ್ರ ಅವರು,
“ಇಂದು ಕೋವಿಡ್ ಪರಿಹಾರಕ್ಕಾಗಿ ಕಾಂಗ್ರೆಸ್ ಕೈಗೊಂಡಿರುವ‌ ಮತ್ತು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಹಾಗೂ ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ರವರ ನಿವಾಸದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಅಧ್ಯಕ್ಷರ ಜೊತೆ ಮಾತನಾಡಿದೆನು” ಬರೆದುಕೊಂಡಿದ್ದಾರೆ.
******

Leave a Reply

Your email address will not be published. Required fields are marked *