ಡಾ. ಭರಣಿ ವೇದಿಕೆಯಿಂದ ಹಿರಿಯ ಸಾಹಿತಿ‌ ಎನ್.ಡಿ ವೆಂಕಮ್ಮ‌ ಅವರಿಗೆ ಸನ್ಮಾನ

ಬಳ್ಳಾರಿ, ಏ.7: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಪ್ರಶಸ್ತಿಗೆ ಭಾಜನರಾಗಿರುವ ನಗರದ ಹಿರಿಯ ಕವಯತ್ರಿ ಶ್ರೀಮತಿ ಎನ್.ಡಿ. ವೆಂಕಮ್ಮ ಅವರನ್ನು ಡಾ. ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.                                          ವೇದಿಕೆ ಗೌರವಾಧ್ಯಕ್ಷ, ಹಿರಿಯ ಸಾಹಿತಿ ಡಾ.‌ವೆಂಕಟಯ್ಯ ಅಪ್ಪಗೆರೆ, ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ್, ವೇದಿಕೆಯ ನಿರ್ದೇಶಕಿ ಸರಸ್ವತಿ ಎನ್‌. ಅಪ್ಪಗೆರೆ ಅವರು ವೆಂಕಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದರು.

ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಡಾ. ಬಾಬು ಜಗಜೀವನ ರಾಮ್ ರವರ 115 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಡಿ ವೆಂಕಮ್ಮ ಸೇರಿ ಐವರಿಗೆ 2022ನೇ ಸಾಲಿನ ರಾಜ್ಯಮಟ್ಟದ ಡಾ. ಬಾಬು ಜಗಜೀವನ ರಾಮ್ ಪ್ರಶಸ್ತಿ ನೀಡಿ ಗೌರವಿಸಿದ್ದರು.
*****

Leave a Reply

Your email address will not be published. Required fields are marked *