ಸಾಹಿತಿ ಸಿದ್ಧರಾಮ ಹಿರೇಮಠರಿಗೆ ದಸಾಪ ಬೆಳ್ಳಿ ಸಂಭ್ರಮ ಗಜಲ್ ಕಾವ್ಯ ಪ್ರಶಸ್ತಿ


ಕೂಡ್ಲಿಗಿ: ಪಟ್ಟಣದ ಹಿರಿಯ ಸಾಹಿತಿ ಸಿದ್ಧರಾಮ ಹಿರೇಮಠ ಅವರಿಗೆ ರಾಜ್ಯ ದಲಿತ ಸಾಹಿತ್ಯ ಪರಿಷತ್ ನ ಬೆಳ್ಳಿ ಸಂಭ್ರಮ ಗಜಲ್ ಕಾವ್ಯ ಪ್ರಶಸ್ತಿ ಲಭಿಸಿದೆ.
ರಾಜ್ಯ ದಲಿತ ಸಾಹಿತ್ಯ ಪರಿಷತ್ ಬೆಳ್ಳಿ ಸಂಭ್ರಮದ ಅಂಗವಾಗಿ ಕೊಡ ಮಾಡುವ ಬೆಳ್ಳಿ ಸಂಭ್ರಮ ಗಜಲ್ ಕಾವ್ಯ ಪ್ರಶಸ್ತಿಗೆ ಸಿದ್ದರಾಮ ಹಿರೇಮಠ ಆಯ್ಕೆಯಾಗಿದ್ದಾರೆ.    ಇದೇ ಅ.30ರಂದು ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಭೈರನಹಟ್ಟಿಯಲ್ಲಿ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ದೊರೆಸ್ವಾಮಿ ವಿರಕ್ತಮಠ ಭೈರನಹಟ್ಟಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ 9ನೇ ಅಖಿಲ ಭಾರತ ಗಜಲ್ ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು.

ಸಿದ್ಧರಾಮ ಹಿರೇಮಠ ಸ್ಥಳೀಯ ಹಿ.ಮ.ವಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *