ಮುಖ್ಯಮಂತ್ರಿಗಳಿಂದ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು, ನ.1: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕರಿಗೆ ಪ್ರಶಸ್ತಿ ವಿತರಿಸಿದರು.
ಬಳ್ಳಾರಿ ಜಿಲ್ಲೆಯ ತಬಲ ವಾದಕ ಎಚ್. ಪಾಂಡುರಂಗಪ್ಪ, ವಿಜಯನಗರ ಜಿಲ್ಲೆಯ ಹೂವಿನ‌ಹಡಗಲಿಯ ಪೌರ ಕಾರ್ಮಿಕ ಮಹಿಳೆ ಶ್ರೀಮತಿ ಎ.ಮಲ್ಲಮ್ಮ ಸೇರಿದಂತೆ ರಾಜ್ಯ, ಹೊರನಾಡು ಮತ್ತು ಹೊರದೇಶದ ಕನ್ನಡಿಗ ಸೇರಿದಂತೆ 67 ಜನ ಸಾಧಕರಿಗೆ ಮುಖ್ಯ ಮಂತ್ರಿಗಳು ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ಕುಮಾರ ಕಾರ್ಕಳ, ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ವಿಧಾನ ಪರಿಷತ್ ಸದಸ್ಯ ಟಿ.ಎ. ಸರವಣ, ಶಾಸಕ ಉದಯ್ ಗರುಡಾಚಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.  *****

Leave a Reply

Your email address will not be published. Required fields are marked *