Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ: ಸೋಲು-ಗೆಲುವು ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಿ -ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ - Karnataka Kahale

ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ: ಸೋಲು-ಗೆಲುವು ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಿ -ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ, ನ.15: ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಇದನ್ನು ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಬೇಕು. ಸೋತವರು ಗೆಲುವಿಗಾಗಿ, ಗೆದ್ದವರು ವಿಶ್ವ ದಾಖಲೆಗಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.


ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಸತತ ಹಾಗೂ ಪ್ರಾಮಾಣಿಕ ಪ್ರಯತ್ನದಿಂದ ಖಂಡಿತವಾಗಿ ಯಶಸ್ಸು ಲಭಿಸುತ್ತದೆ. ಎಂತಹುದೇ ಕಠಿಣ ಪರಿಸ್ಥಿತಿ ಎದುರಾದರೂ ಪ್ರಯತ್ನಿಸುವುದನ್ನು ನಿಲ್ಲಿಸಬಾರದು ಎಂದು ತಿಳಿಸಿದರು.
ದೈಹಿಕ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಕ್ರೀಡೆಯಲ್ಲಿ ಸದಾ ಮುಂದವರೆಯಬೇಕು. ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಧನಾತ್ಮಕ ಮನೋಭಾವದಿಂದ ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಗೊಳಿಸಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಮಾತನಾಡಿ, ದೈಹಿವಾಗಿ ಸಧೃಡರಾಗಿರವವರು ಮಾತ್ರ ಪೊಲೀಸ್ ಇಲಾಖೆಯಲ್ಲಿ ಕೆಲಸಕ್ಕೆ ಆಯ್ಕೆಯಾಗುತ್ತಾರೆ. ಇದಕ್ಕೆ ಹೊರತಾಗಿ ಮಾಸಿಕವಾಗಿ ಹಾಗೂ ಬೌದ್ಧಿಕವಾಗಿ ಬಲಿಷ್ಠವಾಗಿರುವರನ್ನು ವಿವಿಧ ಆಯಾಮಗಳಲ್ಲಿ ಪರಿಗಣಿಸಿ ಅಧಿಕಾರಿಗಳ ಹುದ್ದೆಗೆ ನೇಮಿಸಲಾಗುತ್ತದೆ ಎಂದರು.


ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಆಯ್ಕೆಯಾದವರು ದೈಹಿವಾಗಿ ಸಧೃಡರಾಗಿರುತ್ತಾರೆ. ಇವರೆಲ್ಲರೂ ಕ್ರೀಡೆ ಹಿನ್ನಲೆಯಿಂದ ಬಂದವರಾಗಿರುತ್ತಾರೆ. ವಾರ್ಷಿಕ ಕ್ರೀಡಾ ಕೂಟ ಇವರೆಲ್ಲರಿಗೂ ಹಬ್ಬವಿದ್ದಂತೆ. ಸಹೋದ್ಯೋಗಿಗಳೊಂದಿಗೆ ಕ್ರೀಡಾಮನೋಭವದಿಂದ ಭಾಗಿಯಾವುದು ಮಹತ್ವವಾಗುತ್ತದೆ. ಬಿಡುವಿಲ್ಲದ ಹಾಗೂ ಕಠಿಣ ಕೆಲಸದ ನಡುವೆಯು ನಮ್ಮನ್ನು ನಾವು ಮರು ಹೊಂದಾಣಿಕೆ ಮಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಇಂತಹ ಅವಕಾಶವನ್ನು ಎಲ್ಲರೂ ಸದ್ಭಳಕೆ ಮಾಡಿಕೊಳ್ಳಬೇಕು. ಎಲ್ಲರೂ ಆಸಕ್ತಿಯಿಂದ ಪಾಲ್ಗೊಳ್ಳಬೇಕು. ನಿಮ್ಮ ನಿಮ್ಮ ಉಪವಿಭಾಗಗಳಿಗೆ ಹೆಮ್ಮೆ ತರುವ ಕೆಲಸ ಮಾಡಬೇಕು. ಕ್ರೀಡಾ ಸ್ಪೂರ್ತಿ ಮೆರೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪುರುಷರಿಗಾಗಿ 1500 ಮೀಟರ್ ಮತ್ತು 400 ಮೀಟರ್ ಓಟ ಹಾಗೂ ಮಹಿಳೆಯರಿಗಾಗಿ 400 ಮೀಟರ್ ಓಟದ ಸ್ಪರ್ಧೆಗಳು ಜರುಗಿದವು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಪ್ರಾದೇಶಿಕ ಅರಣ್ಯ ವಿಭಾಗ ಉಪ ಸಂರಕ್ಷಣಾಧಿಕರಿ ರಾಜಣ್ಣ, ಐಮಂಗಲ ಪೊಲೀಸ್ ತರಬೇತಿ ಶಾಲೆಯ ಪ್ರಾಂಶಪಾಲ ಪಿ.ಪಾಪಣ್ಣ, ಡಿಎಆರ್ ಡಿವೈಎಸ್‍ಪಿ ಜಿ.ಎಂ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಉಪವಿಭಾಗಗಳ ಡಿವೈಎಸ್‍ಪಿ, ಸಿಪಿಐ, ಪಿಎಸ್‍ಐ ಅಧಿಕಾರಿಗಳು ಸಿಬ್ಬಂದಿ ಇದ್ದರು.
*****