ಹಂಪಿ ಉತ್ಸವ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಎಸ್ಪಿ ಹರಿಬಾಬು

ಹೊಸಪೇಟೆ(ವಿಜಯನಗರ),ನ.28: ವಿಶ್ವ ಪಾರಂಪರಿಕ ತಾಣ ಹಂಪಿ ಉತ್ಸವವನ್ನು 2023ರ ಜನವರಿ ಮೊದಲ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದರ ಪೂರ್ವಸಿದ್ದತೆಯನ್ನು ಕೈಗೊಳ್ಳಲು ಹಂಪಿಯಲ್ಲಿ ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ವೇದಿಕೆ ನಿರ್ಮಾಣ, ಸಂಚಾರ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ವಸ್ತು ಪ್ರದರ್ಶನ ಆಯೋಜನೆ ಸೇರಿದಂತೆ ಉತ್ಸವ ಮಾಡಲು ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
——

Leave a Reply

Your email address will not be published. Required fields are marked *