ಮಂಡ್ಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ರಾಜ್ಯ ಕಾರ್ಯಕಾರಿ ಸಮಿತಿ ಸಭೆ

ಮಂಡ್ಯ, ಡಿ.10: ನಗರದ ಕರ್ನಾಟಕ ಸಂಘದ ಸಭಾಂಗಣದಲ್ಲಿ ಶುಕ್ರವಾರ (ಡಿ. ೯) ಸಂಜೆ ಕರ್ನಾಟಕ ಜಾನಪದ ಪರಿಷತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಸಭೆ ರಾಜ್ಯ ಅಧ್ಯಕ್ಷ ಡಾ. ಹಿ. ಶಿ. ರಾಮಚಂದ್ರಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಶಿವಮೊಗ್ಗ ಜಿಲ್ಲಾ ಕಜಾಪ ಅಧ್ಯಕ್ಷ ಡಿ. ಮಂಜುನಾಥ ಮಂಡ್ಯ ಜಿಲ್ಲಾ ಅಧ್ಯಕ್ಷ ಡಿ. ಪಿ. ಸ್ವಾಮಿ, ಬೀದರ್ ಜಿಲ್ಲಾ ಅಧ್ಯಕ್ಷ ಡಾ. ಜಗನ್ನಾಥ ಹೆಬ್ಬಾಳೆ, ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ತಿಮ್ಮೇಶ್, ಡಾ. ಹರಪನಹಳ್ಳಿ ತಿಮ್ಮನಗೌಡ, ಡಾ. ಚಿಕ್ಕಣ್ಣ ಯಣ್ಣೇಕಟ್ಟೆ, ಚಾಮರಾಜನಗರ ಜಿಲ್ಲಾಧ್ಯಕ್ಷ. ಎಂ. ನರಸಿಂಹಮೂರ್ತಿ, ಬಳ್ಳಾರಿ ಜಿಲ್ಲಾಧ್ಯಕ್ಷ ಸಿ. ಮಂಜುನಾಥ ಸೇರಿದಂತೆ ಹಲವು ಜಿಲ್ಲಾ ಅಧ್ಯಕ್ಷರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *