ಬೆಂಗಳೂರಿನಲ್ಲಿ ಹಂಪಿ ಉತ್ಸವ ಲೋಗೊ ಬಿಡುಗಡೆ

ಹಂಪಿ ಉತ್ಸವ-2023 ಲೋಗೊ ಅನಾವರಣಗೊಳಿಸಿದ ಸಿಎಂ
ಬೆಂಗಳೂರು, ಜ.21: ವಿಶ್ವವಿಖ್ಯಾತ ಹಂಪಿಯಲ್ಲಿ ಜ.27ರಿಂದ ನಡೆಯಲಿರುವ ಹಂಪಿ ಉತ್ಸವದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ಸವದ ಲೋಗೊ ಅನಾವರಣಗೊಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ಜರುಗಿದ ಸರಳ ಸಮಾರಂಭದಲ್ಲಿ  ಉತ್ಸವದ ಲೋಗೊವನ್ನು ಬಿಡುಗಡೆ ಮಾಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ  ಸಚಿವರಾದ ಅರಗ ಜ್ಞಾನೇಂದ್ರ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಪೌರಾಡಳಿತ ಸಚಿವರಾದ ಎಂಟಿಬಿ ನಾಗರಾಜ್, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.

*****

Leave a Reply

Your email address will not be published. Required fields are marked *