ಬಳ್ಳಾರಿಗೆ ನಾಡಿದ್ದು(ಏ.5) ಪ್ರಧಾನಿ ಮೋದಿ -ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ

ಬಳ್ಳಾರಿ, ಮೇ 3:ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಮೇ 5ರಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ ಹೇಳಿದರು.
ನಗರದ ಹೊರ ವಲಯದ ಶ್ರೀ ಅಮರೇಶ್ವರ ದೇವಸ್ಥಾನದ ಬಳಿ ನಿರ್ಮಿಸುತ್ತಿರುವ ಬೃಹತ್ ವೇದಿಕೆ ಬಳಿ ಬುಧವಾರ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮೋದಿ ಅವರು ಜಿಲ್ಲೆಯ ಸಂಡೂರು, ಸಿರುಗುಪ್ಪ, ಕಂಪ್ಲಿ, ಬಳ್ಳಾರಿ ನಗರ, ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವರು ಎಂದರು.
80 ಸಾವಿರ ಜನಕ್ಕೆ ಅಸನ ವ್ಯವಸ್ಥೆ ಮಾಡಲಾಗಿದೆ.
ಬೇರೆ ಬೇರೆ ಊರುಗಳಿಂದ ಬರುವ ಜನರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಅಧ್ಯಕ್ಷ ಡಾ.ಕೆ. ಲಕ್ಷ್ಮಣ, ಮಾಜಿ ಸಂಸದ ಜಿತೇಂದ್ರ ರೆಡ್ಡಿ, ಮುಖಂಡರಾದ ಕೆ.ಎ. ರಾಮಲಿಂಗಪ್ಪ, ಕೆ.ಎಸ್. ಅಶೋಕ್ ಕುಮಾರ್, ವೀರಶೇಖರ್ ರೆಡ್ಡಿ ಇದ್ದರು.


*****

Leave a Reply

Your email address will not be published. Required fields are marked *