6 ಜನರ ಪ್ರಾಣ ಉಳಿಸಿದ ಪಬ್ಲಿಕ್ ಟಿವಿಯ ವಿಜಯ್ ಮತ್ತು ನಾಗೇಶ್ ಅವರಿಗೆ ಕೆಯುಡಬ್ಲ್ಯೂಜೆ ಗೌರವ

ಬೆಂಗಳೂರು, ಮೇ 24:ನಗರದ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿಕೊಂಡಿದ್ದ ಆರು ಜನರನ್ನು ಮಳೆಯ ನಡುವೆಯೂ ಪಾರು ಮಾಡಲು ಅವಿರತವಾಗಿ ಶ್ರಮಿಸಿದ್ದ ಪಬ್ಲಿಕ್ ಟಿವಿಯ ವಿಜಯಕುಮಾರ್ ಮತ್ತು ನಾಗೇಶ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸನ್ಮಾನಿಸಿ ಗೌರವಿಸಿತು. ಸಂಘದ ಸಭಾಂಗಣದಲ್ಲಿ  ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸನ್ಮಾನಿಸಿ, ನಗದು ಬಹುಮಾನ ನೀಡಿ ಸತ್ಕರಿಸಿದರು. ಕೆಯುಡಬ್ಲ್ಯೂಜೆ ಪದಾಧಿಕಾರಿಗಳಾದ ಜೆ.ಸಿ.ಲೋಕೇಶ, ವಾಸುದೇವ ಹೊಳ್ಳ, ನಿಂಗಪ್ಪ ಚಾವಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *