ನವೆಂಬರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ -ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

              ಬೆಂಗಳೂರು, ಜೂ.7: ಈ ವರ್ಷದ ನವೆಂಬರ್ ತಿಂಗಳಲ್ಲಿ ಬೆಂಗಳೂರು ಟೆಕ್ ಸಮಿಟ್ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.

ನಗರದಲ್ಲಿ ಸಮಿಟ್ ಹಿನ್ನಲೆಯಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸಮಾವೇಶ ಆಯೋಜಕರೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆ ಚಟುವಟಿಕೆಗಳನ್ನು ಪರಿಶೀಲಿಸಿ, ಚರ್ಚಿಸಿದರು.
ಸಮಾವೇಶದ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು, ಈ ಬಾರಿಯ ಸಮಾವೇಶವನ್ನು ಮಾಹಿತಿ ಪೂರ್ಣವಾಗಿ ನಡೆಸಲು ಹಲವಾರು ಸಲಹೆ ಸೂಚನೆಗಳನ್ನು ಸಚಿವರಿ ನೀಡಿದರು.


ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಿಧ ಚಟುವಟಿಕೆಗಳ ಸಂಬಂಧ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿದ ಪ್ರಿಯಾಂಕ್ ಖರ್ಗೆ ಅವರು, ಎಲಿವೇಟ್ ಕರ್ನಾಟಕ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದು, ಸ್ಟಾರ್ಟಪ್ ಆರಂಭಿಸಲು ಮುಂದೆ ಬರುವವರಿಗೆ ಸರ್ಕಾರ ಪ್ರಾಮಾಣಿಕ ನೆರವು ನೀಡಲಿದೆ ಎಂಬುದನ್ನು ಗಮನದಲ್ಲಿರಿಸಿಕೊಂಡು ಯೋಜನೆಯನ್ನು ಪರಾಮರ್ಶಿಸಲು ಸಲಹೆ ನೀಡಿದರು.
ಸಭೆಯಲ್ಲಿ ಮಾಹಿತಿ ತಂತ್ರಜ್ಞಾನ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು
*****

 

Leave a Reply

Your email address will not be published. Required fields are marked *