ಬಳ್ಳಾರಿಯಲ್ಲಿ ಗುರುವಾರ ಶಾಂತಿಯುತ ‘ಕರ್ನಾಟಕ ಬಂದ್’: ಶಿಕ್ಷಣ ಸಂಸ್ಥೆಗಳು, ಸಾಮಾನ್ಯರಿಗೆ ತೊಂದರೆಯಿಲ್ಲ  -ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆ

ಬಳ್ಳಾರಿ, ಜೂ. 20: ಪ್ರಸ್ತುತ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು  ಜೂ.22ರ ಗುರುವಾರ ನೀಡಿರುವ `ಕರ್ನಾಟಕ ಬಂದ್’ ಯಶಸ್ವಿಗೊಳಿಸಲು ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆ ನಿರ್ಧರಿಸಿದೆ.

ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಸಿ. ಶ್ರೀನಿವಾಸರಾವ್, ಗೌರವ ಕಾರ್ಯದರ್ಶಿ ಯಶವಂತ್‌ರಾಜ್ ನಾಗಿರೆಡ್ಡಿ ಅವರು ಜಂಟಿಯಾಗಿ ಮಂಗಳವಾರ ಪತ್ರಕರ್ತರಿಗೆ ಮಾಹಿತಿ ನೀಡಿದರು.    ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆಯ ಸಭಾಭವನದಲ್ಲಿ  ನಡೆದ ಬಳ್ಳಾರಿ ಜಿಲ್ಲಾ ರೈಸ್‌ಮಿಲ್ ಅಸೋಸಿಯೇಷನ್, ಕಾಟನ್ ಅಸೋಸಿಯೇಷನ್, ಇಂಡಸ್ಟ್ರಿಯಲ್ ಅಸೋಸಿಯೇಷನ್, ಸ್ಪಾಂಜ್ ಐರನ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಕೋಲ್ಡ್ ಸ್ಟೊರೇಜ್ ಅಸೋಸಿಯೇಷನ್, ಎಪಿಎಂಸಿ ಮರ್ಚೆಂಟ್ಸ್ ಅಸೋಸಿಯೇಷನ್ ಸೇರಿ ವಿವಿಧ ಸಂಘ – ಸಂಸ್ಥೆಗಳ ಪದಾಧಿಕಾರಿಗಳ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಶಾಂತಿಯುತ ಬಂದ್ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

`ಕರ್ನಾಟಕದ ಬಂದ್’ ಬಳ್ಳಾರಿಯಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವ್ಯಾಪಾರ, ವಾಣಿಜ್ಯೋದ್ಯಮಗಳು ಮತ್ತು ಕೈಗಾರಿಕೆಗಳು ಚಟುವಟಿಕೆಗಳನ್ನು ನಿಲ್ಲಿಸುವ ಮೂಲಕ ಬಂದ್ ಆಚರಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ನಿರ್ಧರಿಸಿವೆ ಎಂದು ಹೇಳಿದರು.

ಶಾಲಾ ಕಾಲೇಜುಗಳು, ಸಾರ್ವಜನಿಕ ಸಾರಿಗೆ, ಆರೋಗ್ಯ ಸೇರಿ ನಾಗರಿಕರ ಜನಜೀವನ ಸಾಮಾನ್ಯವಾಗಿರುತ್ತದೆ. ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಸಭೆ ಸೇರುವ ಪ್ರತಿಭಟನಾಕಾರರು ಬೆಂಗಳೂರು ರಸ್ತೆ, ತೇರುಬೀದಿ ಮೂಲಕ ಎಚ್‌ಆರ್‌ಜಿ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯನ್ನು ತಲುಪಿ ಜಿಲ್ಲಾಡಳಿತಕ್ಕೆ ಪ್ರತಿಭಟನಾ ಮನವಿ ಪತ್ರ ಸಲ್ಲಿಸುವ ಮೂಲಕ ಸಮಾರೋಪಗೊಳ್ಳಲಿದೆ ಎಂದರು.

`ಕರ್ನಾಟಕ ಬಂದ್’ನಲ್ಲಿ ಪಾಲ್ಗೊಳ್ಳಲು ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆಯಲ್ಲಿ ನೋಂದಣಿಯಾಗಿರುವ ಸಂಘಗಳ ಜೊತೆಯಲ್ಲಿ ನಾಗರೀಕರ ಹಿತಾಸಕ್ತಿ ಕಾಪಾಡುವ ಸಂಘ – ಸಂಸ್ಥೆಗಳನ್ನು, ಸಾರ್ವಜನಿಕರನ್ನು ಆಹ್ವಾನಿಸಲಾಗುತ್ತದೆ. ವಿದ್ಯುತ್ ಶುಲ್ಕ ಹೆಚ್ಚಳದ ಬಾಧಿಸಲು ಪಾಲ್ಗೊಳ್ಳಲು ಮುಕ್ತ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

ಹಿರಿಯ ಉಪಾಧ್ಯಕ್ಷ ಬಿ. ಮಹಾರುದ್ರಗೌಡ, ಉಪಾಧ್ಯಕ್ಷರುಗಳಾದ ಎ. ಮಂಜುನಾಥ್, ಕೆ. ರಮೇಶ್ ಬುಜ್ಜಿ, ಕೆ.ಸಿ. ಸುರೇಶಬಾಬು, ಜಂಟಿ ಕಾರ್ಯದರ್ಶಿಗಳಾದ ದೊಡ್ಡನಗೌಡ, ಸೊಂತಾ ಗಿರಿಧರ್, ಕೆಐಡಿಬಿ ಇಂಡಸ್ಟಿçಲ್ ಅಸೋಸಿಯೇಷನ್‌ನ ಮುಖ್ಯಸ್ಥ ವಾಸುದೇವರಾವ್, ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಮತ್ತು ಸಂಘ ಸಂಸ್ಥೆಗಳವರು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *