ಸಿಎಂ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ: ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿ ಸ್ವೀಕರಿಸಿದ ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ

ಬೆಂಗಳೂರು, ಜು. ೨೩:  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ರಾಘವೇಂದ್ರ ಎಂಟರಪ್ರೈಸಸ್ ನ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಹಾಜರಿದ್ದರು. ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Leave a Reply

Your email address will not be published. Required fields are marked *