Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ - Karnataka Kahale

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ

ನವದೆಹಲಿ, ಆ.3: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಅವರಿಗೆ ಗಂಧದ ಅಂಬಾರಿಯನ್ನು ಉಡುಗೊರೆಯಾಗಿ ನೀಡಿದರು.
ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಸೌಹಾರ್ದಯುತ ಭೇಟಿ ಹಾಗೂ ಮಾತುಕತೆ ಸಂದರ್ಭದಲ್ಲಿ ರಾಜ್ಯದ ಅಭಿವೃದ್ದಿ ಯೋಜನೆಗಳು ಹಾಗೂ ಬೃಹತ್ ನೀರಾವರಿ ಯೋಜನೆಗಳಿಗೆ ಕೇಂದ್ರದ ಸಹಕಾರವನ್ನು ಸಿಎಂ ಕೋರಿದ್ದಾರೆ.


ಮೈಸೂರು ದಸರಾದಲ್ಲಿ ಏರ್‌ಶೋ ನಡೆಸಲು ಮನವಿ: ಪ್ರಧಾನಿ ನರೇಂದ್ರ ಮೋದಿ ಭೇಟಿಯ ಬಳಿಕ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿ ಮಾಡಿದರು. ಅ. 15 ರಂದು ಉದ್ಘಾಟನೆ ಆಗಲಿರುವ ಮೈಸೂರು ದಸರಾ ಹಬ್ಬಕ್ಕೆ ಏರ್ ಶೋ ನಡೆಸಲು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಧಿಕೃತವಾದ ಮನವಿ ಪತ್ರವನ್ನೂ ಅವರು ರಾಜನಾಥ್ ಸಿಂಗ್ ಅವರಿಗೆ ನೀಡಿದರು.
ಮೈಸೂರು ದಸರಾ ವಿಶ್ವವಿಖ್ಯಾತವಾಗಿದೆ. ದಸರಾ ಹಬ್ಬದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಏರ್ ಶೋ ನಡೆಸಿದರೆ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗಿಯಾಗಿ ಕಣ್ತುಂಬಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಿಎಂ ಮನವಿ ಮಾಡಿದ್ದಾರೆ.


ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ‌ ಪ್ರತಿನಿಧಿ ಟಿ.ಬಿ. ಜಯಚಂದ್ರ ಇದ್ದರು.
*****