ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿ -ಮುಖ್ಯ ಮಂತ್ರಿ ಸಿದ್ದರಾಮಯ್ಯ

 

ಬೆಂಗಳೂರು, ಆ.8: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.                        ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.                          ಅಪಾರ ಸೇವೆ:  ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ(ಎಐಸಿಸಿ) ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು ಆದ್ಯತೆ ನೀಡಿ, ಏಕೀಕರಣದ ನಂತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಮಾಡುವ ಇಚ್ಛಾಶಕ್ತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿದರು.

ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಅವರು ತಮ್ಮ ಜೀವನದುದ್ದಕ್ಕೂ ಅದನ್ನು ಕಾಪಾಡಿಕೊಂಡು ಬಂದವರು. ಧೀಮಂತ ನಾಯಕರಾಗಿದ್ದ ಅವರ ಪುಣ್ಯತಿಥಿ ಆಚರಿಸಿ ಗೌರವ ಸಲ್ಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅವರ ಬದುಕು ನಮಗೆ ಮಾರ್ಗದರ್ಶನ ನೀಡಲಿ ಎಂದರು. ನಿಜಲಿಂಗಪ್ಪನವರು ಈ ನಾಡಿಗೆ ಹಾಗೂ ದೇಶಕ್ಕೆ ಮಾಡಿದ ಸೇವೆಯನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು.

Leave a Reply

Your email address will not be published. Required fields are marked *