77ನೇ ಸ್ವಾತಂತ್ರೋತ್ಸವ ಸಂಭ್ರಮ: ಬಳ್ಳಾರಿಯ ನೂತನ ಜಿಲ್ಲಾಡಳಿತ ಭವನದಲ್ಲಿ ಡಿಸಿ ಮಿಶ್ರಾ ಧ್ವಜಾರೋಹಣ

ಬಳ್ಳಾರಿ,ಆ.15:ನಗರದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಪ್ರಥಮ ಬಾರಿಗೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು 77ನೇ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಎಲ್ಲರಿಗೂ ಸ್ವಾತಂತ್ಯ ದಿನಾಚರಣೆಯ ಶುಭಾಷಯ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಹೇಮಂತ್‍ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ತಹಶೀಲ್ದಾರ ಸಿ. ಗುರುರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು.
——-

Leave a Reply

Your email address will not be published. Required fields are marked *