Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ನಾಳೆಯಿಂದ(ಆ.26) ಬಳ್ಳಾರಿಯಲ್ಲಿ 2ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ -ಆಯೋಜಕ ಕಟ್ಟೆ ಸ್ವಾಮಿ - Karnataka Kahale

ನಾಳೆಯಿಂದ(ಆ.26) ಬಳ್ಳಾರಿಯಲ್ಲಿ 2ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ -ಆಯೋಜಕ ಕಟ್ಟೆ ಸ್ವಾಮಿ

ಬಳ್ಳಾರಿ, ಆ.25: ಟ್ರೇಡಿಷನಲ್ ಶೋಟೋಕನ್ ಕರಾಟೆ ಅಕಾಡೆಮಿ ಕರ್ನಾಟಕ ಮತ್ತು  ಡಬ್ಲುಟಿಎಸ್ ಕೆ ಎಫ್  ಇವರ ಸಂಯುಕ್ತಾಶ್ರಯದಲ್ಲಿ ಎರಡನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಆ.26 ಮತ್ತು 27 ರಂದು  ನಗರದ ವಾಲ್ಮೀಕಿ ಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಹಿರಿಯ ತರಬೇತುದಾರರು, ಪಂದ್ಯಾವಳಿಯ ಆಯೋಜಕ ಕಟ್ಟೆ ಸ್ವಾಮಿ ತಿಳಿಸಿದ್ದಾರೆ.
ಪಂದ್ಯಾವಳಿಯನ್ನು  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಉದ್ಘಾಟಿಸುವರು.
ಮುಖ್ಯಅತಿಥಿಗಳಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ,  ಮಹಾನಗರ ಪಾಲಿಕೆ ಮಹಾಪೌರರಾದ  ಕುಮಾರಿ ಡಿ ತ್ರಿವೇಣಿ ಅವರು ಸೇರಿದಂತೆ ಹಲವು ಗಣ್ಯರು  ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಪಂದ್ಯಾವಳಿಯಲ್ಲಿ  ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ 800ಕ್ಕೂ ಹೆಚ್ಚು ಕರಾಟೆಪಟುಗಳು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಕಟ್ಟೆಸ್ವಾಮಿ ಮಾಹಿತಿ ನೀಡಿದ್ದಾರೆ.
—–