ತಾಂತ್ರಿಕ ನಿಲುಗಡೆಗಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ  ಆಗಮನ: ಸ್ವಾಗತಿಸಿದ ಬಳ್ಳಾರಿ  ಜಿಲ್ಲಾಡಳಿತ

ಬಳ್ಳಾರಿ,ಸೆ.2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ  ಗರಿಷ್ಟ ಮಟ್ಟದಲ್ಲಿ ನೀರು ಸಂಗ್ರಹಣೆಯಾದ ಪ್ರಯುಕ್ತ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗಿಯಾಗಲು ಶನಿವಾರ ಬಳ್ಳಾರಿಯ ತೋರಣಗಲ್ ನ ಜಿಂದಾಲ್ ಬಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಜಿಲ್ಲಾಡಳಿತದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
  ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪುಷ್ಪ ಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
  ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ತ್ರಿವೇಣಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ಸ್ಥಳೀಯ ಪ್ರತಿನಿಧಿಗಳು ಇದ್ದರು.

Leave a Reply

Your email address will not be published. Required fields are marked *