Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ರಾಮನಗರ: ಜಾನಪದ ಮತ್ತು ಪ್ರದರ್ಶಕ ಕಲೆಗಳ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಗೆ ಅರ್ಜಿ - Karnataka Kahale

ರಾಮನಗರ: ಜಾನಪದ ಮತ್ತು ಪ್ರದರ್ಶಕ ಕಲೆಗಳ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಗೆ ಅರ್ಜಿ

ಜಾನಪದ ಲೋಕ(ರಾಮನಗರ): ಕರ್ನಾಟಕ ಜಾನಪದ ಪರಿಷತ್ತು, ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಜಾನಪದ ಲೋಕದಲ್ಲಿ ೨೦೨೩-೨೦೨೪ರ ಶೈಕ್ಷಣಿಕ ಸಾಲಿಗೆ ಕನಿಷ್ಟ ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ “ಜಾನಪದ ಮತ್ತು ಪ್ರದರ್ಶಕ ಕಲೆಗಳ ಡಿಪ್ಲೊಮಾ ಕೋರ್ಸ್”ಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೋರ್ಸ್ ಗೆ ಸೇರಲು ವಯಸ್ಸಿನ ಮಿತಿ ಇರುವುದಿಲ್ಲ. ಈ ಜಾನಪದ ಡಿಪ್ಲೊಮಾ ಒಂದು ವರ್ಷದ ಅವಧಿಯದ್ದಾಗಿದ್ದು, ಪ್ರತಿ ಭಾನುವಾರ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ತರಗತಿಗಳು ನಡೆಯಲಿವೆ. ಕಲೆಗಳ ತರಬೇತಿ ಹಾಗೂ ಕಲಿಕೆಯ ಪ್ರಾತ್ಯಕ್ಷಿತೆಗಳನ್ನೊಳಗೊಂಡ ಈ ಡಿಪ್ಲೊಮಾ ಕೋರ್ಸ್ ವಿಶಿಷ್ಟ ಸ್ವರೂಪದಲ್ಲಿರುತ್ತದೆ. ೪೦ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದ್ದು, ಆಸಕ್ತರು ಇದೇ ಸೆ. 9 ರೊಳಗೆ ಜಾನಪದ ಲೋಕ, ಬೆಂಗಳೂರು-ಮೈಸೂರು ಹೆದ್ದಾರಿ, ಐಜೂರು ಅಂಚೆ, ರಾಮನಗರ, ರಾಮನಗರ ಜಿಲ್ಲೆ. ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ೯೬೮೬೬೦೧೧೬೬ ಸಂಪರ್ಕಿಸಬಹುದು.
—–