ಬಳ್ಳಾರಿ ಜಿಲ್ಲೆ: ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ವರ್ಗಾವಣೆ

ಬೆಂಗಳೂರು, ಸೆ.10: ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಜಡಿಯಪ್ಪ ಅವರು ಕೆಲ ದಿನಗಳ ಹಿಂದಷ್ಟೇ 371ಜೆ ಅಡಿ ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಪಡೆದು ಸ್ಥಳ ನಿರೀಕ್ಷೆಯಲ್ಲಿದ್ದ ಅವರಿಗೆ ಬಳ್ಳಾರಿ ಜಿಲ್ಲೆಗೆ ನಿಯುಕ್ತಿಗೊಳಿಸಲಾಗಿದೆ.

ಬಳ್ಳಾರಿ ಕಚೇರಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಕೆ.ರಾಮಲಿಂಗಪ್ಪ ಅವರು ಉಪನಿರ್ದೇಶಕರಾಗಿ ಬಡ್ತಿ ಹೊಂದಿ ಕೇಂದ್ರ ಕಚೇರಿಗೆ ವರ್ಗಾವಣೆ ಆದ ಒಂದು ವರ್ಷದ ನಂತರ ಪೂರ್ಣ ಪ್ರಮಾಣದ ಅಧಿಕಾರಿಯನ್ನು ಸರಕಾರ ನಿಯೋಜಿಸಿದೆ.  ಜಡಿಯಪ್ಪ ಅವರು ಅವಿಭಜಿತ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕುಗ್ರಾಮದಲ್ಲಿ‌ ಜನಿಸಿದ ಪ್ರತಿಭೆ.  ಮೈಸೂರಿನಲ್ಲಿ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರೈಸಿ ವಾರ್ತಾ ಇಲಾಖೆಯಲ್ಲಿ ಅಧಿಕಾರಿಯಾಗಿ ನೇಮಕ‌ಹೊಂದಿದ್ದರು.

 

Leave a Reply

Your email address will not be published. Required fields are marked *