ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ.ಜಿ ಅಧಿಕಾರ ಸ್ವೀಕಾರ: ಸನ್ಮಾನ


ಬಳ್ಳಾರಿ,ಸೆ.12:ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ.ಜಿ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಈವರೆಗೆ ಕಚೇರಿಯ ಪ್ರಭಾರಿ ಹಿರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ, ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ತುಕರಾಂ ರಾವ್ ಬಿ.ವಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು.
ಇದಕ್ಕೂ ಮುಂಚೆ ಜಡಿಯಪ್ಪ.ಜಿ ಅವರು ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರವು ಇವರಿಗೆ ಮುಂಬಡ್ತಿ ನೀಡಿ, ಬಳ್ಳಾರಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

ಸನ್ಮಾನ:  ಬಳ್ಳಾರಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಕ ಸಂಪರ್ಕ  ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಜಡಿಯಪ್ಪ ಜಿ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಸಿ.ಮಂಜುನಾಥ್ ಅವರು ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಈವರೆಗೆ ಪ್ರಭಾರಿ ಹಿರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಚಿತ್ರದುರ್ಗ ಜಿಲ್ಲಾ‌ ವಾರ್ತಾಧಿಕಾರಿ ತುಕಾರಾಂ‌ ರಾವ್ ಅವರನ್ನು‌ ಗೌರವಿಸಲಾಯಿತು.          ‌ ‌ ‌‌‌‌ ಈ ಸಂದರ್ಭದಲ್ಲಿ ಇಲಾಖೆಯ ಪ್ರಥಮ‌ದರ್ಜೆ ಸಹಾಯಕ ಗುರುರಾಜ್, ಬೆರಳಚ್ಚುಗಾರ ಹನುಮೇಶ್, ಚಾಲಕ ಮಲ್ಲೇಶಪ್ಪ, ಇತರೆ‌ ಸಿಬ್ನಂದಿಗಳು ಇದ್ದರು.

——–

Leave a Reply

Your email address will not be published. Required fields are marked *