Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಸಿರಿಗನ್ನಡ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಲಂಭಾಷ ನೇಮಕ - Karnataka Kahale

ಸಿರಿಗನ್ನಡ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಲಂಭಾಷ ನೇಮಕ

ಬಳ್ಳಾರಿ, ಅ.30: ಸಿರಿಗನ್ನಡ ವೇದಿಕೆಯ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಗರದ ಸತ್ಯಂ‌ ಬಿಇಡಿ ಕಾಲೇಜಿನ ಸಹಾಯಕ‌ ಪ್ರಾಧ್ಯಾಪಕ ಆಲಂ‌ಭಾಷ ಅವರು ನೇಮಕವಾಗಿದ್ದಾರೆ.

ಆಲಂಭಾಷ

ಭಾನುವಾರ ಹೊಸಪೇಟೆ ನಗರದಲ್ಲಿ‌ ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಜಿ ಎಸ್ ಗೋನಾಳ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಲಂ‌ಭಾಷ ಮತ್ತು ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಿವೃತ್ತ ಇಂಜನಿಯರ್ ಕೆ.‌ಬಸವರಾಜ್ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಿ ಆದೇಶಿಸಲಾಯಿತು.
ಇದೇ ಸಂದರ್ಭದಲ್ಲಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷ ಜಿ ಎಸ್. ಗೋನಾಳ್ ಅವರು ಉಭಯರಿಗೂ ನೇಮಕ ಆದೇಶ ಪತ್ರಗಳನ್ನು ನೀಡಿ ಶುಭಹಾರೈಸಿದರು.
ನೂತನ ಜಿಲ್ಲಾಧ್ಯಕ್ಷರುಗಳು ಆದಷ್ಟು ಬೇಗ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳನ್ನು ಆಯ್ಕೆಮಾಡಿ ಪಟ್ಟಿಯನ್ನು ರಾಜ್ಯ ಘಟಕದಿಂದ ಅನುಮೋದನೆ ಪಡೆದುಕೊಳ್ಳಬೇಕು ಹಾಗೂ ಕನ್ನಡ ಕಟ್ಟುವ ಕೆಲಸದಲ್ಲಿ ನಿರತರಾಗಬೇಕೆಂದು ಪತ್ರದಲ್ಲಿ ಆಶಿಸಲಾಗಿದೆ
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಸಿರಿಗನ್ನಡ ವೇದಿಕೆಯ ಅಧ್ಯಕ್ಷ ಮಂಜುನಾಥ ಚಿತ್ರಗಾರ ಮತ್ತಿತರರು ಉಪಸ್ಥಿತರಿದ್ದರು.
*****