Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ರಾಷ್ಟ್ರಮಟ್ಟದಲ್ಲಿ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಗುರಿ -ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ - Karnataka Kahale

ರಾಷ್ಟ್ರಮಟ್ಟದಲ್ಲಿ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಗುರಿ -ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ

ದಾವಣಗೆರೆ; ಡಿ.26: ದಾವಣಗೆರೆ ಬೆಣ್ಣೆ ದೋಸೆಯನ್ನು ರಾಷ್ಟ್ರಮಟ್ಟದಲ್ಲಿ ಜನಪ್ರಿಯಗೊಳಿಸಲು ಹಾಗೂ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟ ಕಾಪಾಡಿಕೊಂಡು ಬ್ರಾಂಡಿಂಗ್ ಕಲ್ಪಿಸುವುದು ಈ ದೋಸೋತ್ಸವದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಎಂ.ಬಿ.ಎ ಮೈದಾನ ಮತ್ತು ಗ್ಲಾಸ್ ಹೌಸ್ ಮುಂಭಾಗದಲ್ಲಿ ಆಯೋಜಿಸಲಾದ ದೋಸೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದಾವಣಗೆರೆ ಬೆಣ್ಣೆ ದೋಸೆ ಇತಿಹಾಸ ಪ್ರಸಿದ್ಧವಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ದೋಸೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ದೋಸೋತ್ಸವ ಏರ್ಪಡಿಸಲಾಗಿದೆ ಎಂದು ಹೇಳಿದರು.
ಕಳೆದ ನಾಲ್ಕು ದಶಕಗಳಿಂದ ಬೆಣ್ಣೆ ದೋಸೆ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರ ಮುಖಾಂತರ ಸಾರ್ವಜನಿಕರಿಗೆ ಗುಣಮಟ್ಟದ ಬೆಣ್ಣೆ ದೋಸೆಯನ್ನು ತಲುಪಿಸುವಲ್ಲಿ ಜಿಲ್ಲಾಡಳಿತ ಸಫಲವಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ. ಸಂತೋಷ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವತ್ ಎಂ.ಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶಿದ್ರಾಮ್ ಮಾರಿಹಾಳ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ಉಪಸ್ಥಿತರಿದ್ದರು.
——