ಬಳ್ಳಾರಿ: ಕಾಂಗ್ರೆಸ್ ಪಕ್ಷದಿಂದ ಈ.ತುಕಾರಾಂ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಸಹಿತ ಮೊದಲ ದಿನ 4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಳ್ಳಾರಿ,ಏ.12: ಬಳ್ಳಾರಿ (ಪ.ಪಂ) ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏ.12 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೊದಲ ದಿನ 4 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.


ಮೊದಲನೇ ದಿನವಾದ ಶುಕ್ರವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಂ ಅವರು 3 ನಾಮಪತ್ರ, ಬಿಜೆಪಿ ಅಭ್ಯರ್ಥಿ ಶ್ರೀರಾಮಲು ಅವರು 3 ನಾಮಪತ್ರ ಮತ್ತು ಪಕ್ಷೇತರ ಅಭ್ಯರ್ಥಿ ಭಾಗ್ಯಲಕ್ಷ್ಮಿ ಅವರು 2 ನಾಮಪತ್ರ,
ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್ ಅವರು 2 ನಾಮಪತ್ರ,
ಸೇರಿ ಒಟ್ಟು ನಾಲ್ವರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಲು ಏ. 19 ಕೊನೆ ದಿನವಾಗಿದ್ದು, ಏ. 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 22 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
——–

Leave a Reply

Your email address will not be published. Required fields are marked *