Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿ‌ವಿ ಎಸ್ ಕೆ ವಿವಿಯಲ್ಲಿ ಸಮಾನತೆ ಹರಿಕಾರ ಡಾ.‌ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ - Karnataka Kahale

ಬಳ್ಳಾರಿ‌ವಿ ಎಸ್ ಕೆ ವಿವಿಯಲ್ಲಿ ಸಮಾನತೆ ಹರಿಕಾರ ಡಾ.‌ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ,ಏ.14: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ ಇವರ ಆಶ್ರಯದಲ್ಲಿ ಭಾನುವಾರ ಸಂವಿಧಾನದ ಶಿಲ್ಪಿ, ಸಮಾನತೆಯ ಹರಿಕಾರ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮ ದಿನವನ್ನು ಸಂಭ್ರಮ, ಸಡಗರದಿಂದ  ಆಚರಿಸಲಾಯಿತು.
ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ವಿಜಯ ಕುಮಾರ್ ಮಲಶೆಟ್ಟಿ, ಕುಲಸಚಿವ ಎಸ್.ಎನ್.ರುದ್ರೇಶ್, ಕುಲಸಚಿವರು (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಡಾ. ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ನಡೆಸಬೇಕು’ ಎಂದು ಪ್ರಭಾರ ಕುಲಪತಿ ಪ್ರೊ.ವಿಜಯ ಕುಮಾರ್ ಮಲಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಂವಿಧಾನದ ಆಶಯದಂತೆ ಎಲ್ಲರೂ ತಮ್ಮ ಹಕ್ಕುಗಳನ್ನು ಅರಿತುಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದ ಕೀರ್ತಿ ಬಾಬಾ ಸಾಹೇಬ್ ರಿಗೆ ಸಲ್ಲುತ್ತದೆ ಎಂದು ಕುಲಸಚಿವ ಎಸ್.ಎನ್.ರುದ್ರೇಶ್ ಅವರು  ಹೇಳಿದರು.
ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
——-