ತುಂಗಭದ್ರಾ ಜಲಾಶಯಕ್ಕೆ ಬಿ.ವೈ ವಿಜಯೇಂದ್ರ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ ಭೇಟಿ: ಪರಿಶೀಲನೆ

ಹೊಸಪೇಟೆ (ವಿಜಯನಗರ), ಆ.12: ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ  ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ವಿರೋಧ ಪಕ್ಷ ನಾಯಕ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜಲಾಶಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆನಂದ್ ಸಿಂಗ್,  ಹಾಲಪ್ಪ ಆಚಾರ್, ಮಾಜಿ ಸಂಸದ ಶಿವರಾಮೇಗೌಡ, ಶಾಸಕರಾದ  ದೊಡ್ಡನಗೌಡ ಪಾಟೀಲ್, ಶ್ರೀಮತಿ ಹೇಮಲತಾ ನಾಯಕ್, ಮಾಜಿ ಶಾಸಕರಾದ  ಬಸವರಾಜ ದಡೇಸುಗೂರು, ಮುಖಂಡರಾದ  ಬಸವರಾಜ ಕ್ಯಾವಟರ್,  ಸುರೇಶ್ ಬಾಬು, ಸಿದ್ಧಾರ್ಥ ಸಿಂಗ್, ಎಸ್.ಟಿ.ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
—–

Leave a Reply

Your email address will not be published. Required fields are marked *