ಬಿಡಿಸಿಸಿಐನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬಳ್ಳಾರಿ,  ಸೆ.-17:  ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ  ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು  ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿ ಮತ್ತು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಇವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ  ಅಧ್ಯಕ್ಷ ಬಿ. ಮಹಾರುದ್ರಗೌಡ, ಹಿರಿಯ ಉಪಾಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಗೌರವ ಕಾರ್ಯದರ್ಶಿ  ಕೆ.ಸಿ. ಸುರೇಶಬಾಬು, ಉಪಾಧ್ಯಕ್ಷರುಗಳಾದ ಅವ್ವಾರು ಮಂಜುನಾಥ್, ಸೊಂತ ಗಿರಿಧರ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ,  ವಿ. ರಾಮಚಂದ್ರ, ಜಂಟಿ ಖಜಾಂಚಿಗಳಾದ ನಾಗಳ್ಳಿ ರಮೇಶ, ಉಪಸಮಿತಿಗಳ ಚೇರ್‌ಮನ್‌ಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಮತ್ತು ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *