Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ - Karnataka Kahale

ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಸೆ. 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.                ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ  ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.                          ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂಗಳಿಂದ 3000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.                                                  ಬಿಜೆಪಿ ಸರ್ಕಾರ ಕಲೆ ಸಂಸ್ಕೃತಿಗೆ ದ್ರೋಹ ಬಗೆದು ಪ್ರಶಸ್ತಿ ವಿತರಣೆ ನಿಲ್ಲಿಸಿತ್ತು. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸಿಎಂ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ಜೀವಮಾನದ ಸಾಧನೆ ಪ್ರಶಸ್ತಿ ಪುರಸ್ಕೃತರಾದ ಡಾ.ಉಮಾಶ್ರೀ, ಪ್ರೊ.ಎಚ್.ಎಸ್.ಶಿವಪ್ರಕಾಶ್, ಕೋಟಿಗನಹಳ್ಳಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.