Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಕೊಪ್ಪಳ ವಿ.ವಿ ಯಿಂದ ಅ.೩ರಂದು ದಸರಾ ಕಾವ್ಯ ಸಂಭ್ರಮ - Karnataka Kahale

ಕೊಪ್ಪಳ ವಿ.ವಿ ಯಿಂದ ಅ.೩ರಂದು ದಸರಾ ಕಾವ್ಯ ಸಂಭ್ರಮ

ಕೊಪ್ಪಳ, ಅ.1: ಕೊಪ್ಪಳ ವಿಶ್ವವಿದ್ಯಾಲಯ ಅ.3ರಂದು ಎರಡನೆಯ ವರ್ಷದ ದಸರಾ ಕಾವ್ಯ ಸಂಭ್ರಮವನ್ನು ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ತಿಳಿಸಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಾಹಿತಿಗಳಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು.                             ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಮುನಿರಾಜು ಹಾಗೂ ಕಲಬುರ್ಗಿ ರಂಗಾಯಣ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ ಮತ್ತು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್.ರುದ್ರೇಶ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.


ಪ್ರೊ.ಬಿ.ಕೆ ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಹಿರಿಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಜರುಗುವುದು.              ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್ ಮತ್ತು ವಿವಿಯ ಎಲ್ಲಾ ವಿಭಾಗದ ಅಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು.