ಬಳ್ಳಾರಿಯಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ -ಎಡಿಸಿ ಮಹಮ್ಮದ್.ಎನ್ ಝುಬೇರ್


ಬಳ್ಳಾರಿ,ನ.6: ಸರ್ಕಾರದ ನಿರ್ದೇಶನದಂತೆ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನ.11 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ತಮ್ಮ ಚೇಂಬರ್ ನಲ್ಲಿ ಬುಧವಾರ ಏರ್ಪಡಿಸಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ನ.11 ರಂದು ಬೆಳಿಗ್ಗೆ 11 ಗಂಟೆಗೆ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲರೂ ತಪ್ಪದೇ ಪಾಲ್ಗೊಳ್ಳುವಂತೆ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಹಾಗೂ ಸಂಗೀತ ಕಾರ್ಯಕ್ರಮ ಆಯೋಜಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಸತಿನಿಲಯದ ವಿದ್ಯಾರ್ಥಿನಿಯರು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಮತ್ತು ಲಘು ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದರು.
ಶಿಷ್ಠಾಚಾರದ ಅನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ  ಸಿಎಂಎಸ್ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.
———

Leave a Reply

Your email address will not be published. Required fields are marked *