ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ

ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ

ನವ ದೆಹಲಿ, ನ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.  ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು.                ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.

Leave a Reply

Your email address will not be published. Required fields are marked *