Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಹುಬ್ಬಳ್ಳಿ: ಸ್ಪೋಟದಿಂದ ಗಾಯಗೊಂಡಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ.‌ಜಿ. ಪರಮೇಶ್ವರ್ - Karnataka Kahale

ಹುಬ್ಬಳ್ಳಿ: ಸ್ಪೋಟದಿಂದ ಗಾಯಗೊಂಡಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ.‌ಜಿ. ಪರಮೇಶ್ವರ್

ಹುಬ್ಬಳ್ಳಿ, ಡಿ.24:ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಲ್ಲಿನ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಪೋಟದಿಂದ ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದರು.                                     ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ, ತಜ್ಞ ವೈದ್ಯರ ತಂಡದಿಂದ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.             ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗಾಯಾಳುಗಳಿಗೆ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಬಳಿ ಮನವಿ ಮಾಡಲಾಗುವುದು ಎಂದು ಡಾ. ಪರಮೇಶ್ವರ್ ಅವರು ತಿಳಿಸಿದರು.                              ಈ ಸಂದರ್ಭದಲ್ಲಿ ಸಚಿವರಾದ ಸಂತೋಷ್ ಲಾಡ್, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು, ಕೆಎಂಸಿಆರ್‌ಐ ನಿರ್ದೇಶಕ ಡಾ. ಎಸ್.ಎಫ್.ಕಮ್ಮಾರ, ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಇದ್ದರು.